ವಿದ್ಯಾರ್ಥಿಗಳಲ್ಲಿ ಶಿಕ್ಷಕರು ರಾಷ್ಟ್ರಪ್ರಜ್ಞೆ ಮೂಡಿಸಲಿ: ಶ್ರೀಗಳುರಾಷ್ಟ್ರೀಯತೆ, ಭಾವೈಕ್ಯತೆ, ರಾಷ್ಟ್ರಗೀತೆ, ಧ್ವಜಗಳ ಮಹತ್ವಗಳ ಕುರಿತು ವಿದ್ಯಾರ್ಥಿಗಳೂ ಸೇರಿದಂತೆ ಜನರಲ್ಲಿ ಜಾಗೃತಿ ಮೂಡಿಸುವ ಗುರುತರ ಜವಾಬ್ದಾರಿ ಶಿಕ್ಷಕರ ಮೇಲಿದೆ. ವಿಶೇಷವಾಗಿ ಭಾರತೀಯ ಸೇವಾದಳದ ಪದಾಧಿಕಾರಿಗಳು ಈ ಬಗ್ಗೆ ಕಾರ್ಯಕಾರಗಳನ್ನು ನಡೆಸುವ ಮೂಲಕ ರಾಷ್ಟ್ರೀಯತೆ ಜಾಗೃತಗೊಳಿಸುವ ಕೆಲಸ ಮಾಡುತ್ತಿರುವುದು ಶ್ಲಾಘನೀಯ ಎಂದು ಹಿರೇಕಲ್ಮಠದ ಡಾ.ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಮಹಾಸ್ವಾಮೀಜಿ ಹೊನ್ನಾಳಿಯಲ್ಲಿ ನುಡಿದಿದ್ದಾರೆ.