5ರಂದು ಜಿಲ್ಲಾ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಸೆ.5ರಂದು ನಗರದ ಹದಡಿ ರಸ್ತೆಯ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಕಲ್ಯಾಣ ಮಂಟಪದಲ್ಲಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನಾಚರಣೆ ಹಾಗೂ ಶಿಕ್ಷಕರ ದಿನ ಅಂಗವಾಗಿ ಜಿಲ್ಲಾ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿ ಪುರಸ್ಕೃತರು ಮತ್ತು ದಾವಣಗೆರೆ ಉತ್ತರ ಮತ್ತು ದಕ್ಷಿಣ ವಲಯದ ನಿವೃತ್ತ ಶಿಕ್ಷಕರಿಗೆ ಸನ್ಮಾನ ಸಮಾರಂಭ ಆಯೋಜಿಸಲಾಗಿದೆ.