ವೈಕುಂಠ ಏಕಾದಶಿ: ಜಿಲ್ಲಾದ್ಯಂತ ಶ್ರೀ ವೆಂಕಟೇಶ್ವರ ನಾಮಜಪವೈಕುಂಠ ಏಕಾದಶಿ ಅಂಗವಾಗಿ ನಗರ, ಜಿಲ್ಲಾದ್ಯಂತ ಶ್ರೀ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನಗಳಲ್ಲಿ ಶುಕ್ರವಾರ ನಸುಕಿನಿಂದಲೇ ಅಭಿಷೇಕ, ಅಲಂಕಾರ, ಪೂಜೆ, ಮಂಗಳಾರತಿ, ಮಹಾಮಂಗಳಾರತಿ ಕಾರ್ಯ ಶ್ರದ್ಧಾಭಕ್ತಿಯಿಂದ ನೆರವೇರಿದ್ದು, ಲಕ್ಷಾಂತರ ಭಕ್ತರು ಶ್ರೀ ಲಕ್ಷ್ಮೀ ನಾರಾಯಣ ದರ್ಶನ ಪಡೆದು ಪುನೀತರಾದರು.