ಜಿಲ್ಲಾ ಸಮ್ಮೇಳನಕ್ಕೆ ಸಾಹಿತ್ಯಾಸಕ್ತರ ಬಹಿಷ್ಕಾರ: ದೊಣೆಹಳ್ಳಿ ಗುರುಮೂರ್ತಿ ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಎಲ್ಲಾ ಸಾಹಿತ್ಯಿಕ ಮಾನದಂಡಗಳನ್ನೂ ಉಲ್ಲಂಘಿಸಿ, ಕೆಲವೇ ಕೆಲವರ ಸ್ವಹಿತಾಸಕ್ತಿಗಾಗಿ ಸಮ್ಮೇಳನ ನಡೆಸಲು ಹೊರಟ ಹಿನ್ನೆಲೆಯಲ್ಲಿ ಸಮ್ಮೇಳನವನ್ನೇ ಬಹಿಷ್ಕರಿಸಲಿದ್ದೇವೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಜೀವ ಸದಸ್ಯ, ಹಿರಿಯ ಪತ್ರಕರ್ತ ದೊಣೆಹಳ್ಳಿ ಗುರುಮೂರ್ತಿ ಎಚ್ಚರಿಸಿದರು. ದಾವಣಗೆರೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.