ರಾಜ್ಯದಲ್ಲಿ ಪ್ರಾದೇಶಿಕ ಪಕ್ಷ ಸ್ಥಾಪನೆಗೆ ಸಕಾಲ: ಕೋಡಿಹಳ್ಳಿ ಚಂದ್ರಶೇಖರರಾಜ್ಯದಲ್ಲಿ ಈವರೆಗೆ ಅಧಿಕಾರಕ್ಕೆ ಬಂದ ಕಾಂಗ್ರೆಸ್, ಜೆಡಿಎಸ್, ಬಿಜೆಪಿಯಂತಹ ಪಕ್ಷಗಳು ಯಾವುದೇ ಹಂತದಲ್ಲೂ ಜನಸಾಮಾನ್ಯರು, ರೈತರು, ಕೂಲಿ ಕಾರ್ಮಿಕರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಂಡಿಲ್ಲ. ಆದ್ದರಿಂದ ರಾಷ್ಟ್ರೀಯ ಪಕ್ಷಗಳಿಗೆ ಪರ್ಯಾಯವಾಗಿ ಪ್ರಾದೇಶಿಕ ಪಕ್ಷ ಅಸ್ತಿತ್ವದ ತುರ್ತು ಅಗತ್ಯವಿದೆ. ಈ ಹಿನ್ನೆಲೆ ಆಂದೋಲನ ಆರಂಭಿಸಲಾಗಿದೆ ಎಂದು ರೈತ ನಾಯಕ ಕೋಡಿಹಳ್ಳಿ ಚಂದ್ರಶೇಖರ ಹೇಳಿದ್ದಾರೆ.