ಅತ್ಯಾಚಾರ, ಹತ್ಯೆ ಆರೋಪಿಗಳ ಶೀಘ್ರ ಪತ್ತೆಹಚ್ಚಿ, ಬಂಧಿಸಿದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಹಾಗೂ ಸುತ್ತಲಿನ ಪ್ರದೇಶದಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ, ಹತ್ಯೆ ಮಾಡಿದವರು ಯಾರೆಂಬ ಸತ್ಯ ಬಯಲಿಗೆಳೆದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ನಗರದ ಶ್ರೀ ಜಯದೇವ ವೃತ್ತದಲ್ಲಿ ಗುರುವಾರ ಅಖಿಲ ಭಾರತ ರಾಷ್ಟ್ರೀಯ ಮಹಿಳಾ ಒಕ್ಕೂಟ, ನೆರಳು ಬೀಡಿ ಕಾರ್ಮಿಕರ ಸಂಘಟನೆ, ಮಹಿಳಾ ಮುನ್ನಡೆ ಸಂಘಟನೆಗಳ ನೇತೃತ್ವದಲ್ಲಿ ದಾವಣಗೆರೆಯಲ್ಲಿ ಪ್ರತಿಭಟನೆ ನಡೆಯಿತು.