ಹರಿಹರ ಜಾತ್ರೆಯಲ್ಲಿ ಪ್ರಾಣಿಬಲಿ ಬೇಡ: ದಯಾನಂದ ಶ್ರೀ ಮನವಿಹರಿಹರದ ಗ್ರಾಮ ದೇವತೆ ಶ್ರೀ ಊರಮ್ಮ ದೇವಿ ಜಾತ್ರೆ ಮಾ.18ರಿಂದ 22ರವರೆಗೆ ನಡೆಯಲಿದ್ದು, ಜಾತ್ರೆಯಲ್ಲಿ ದೇವರು, ಧರ್ಮದ ಹೆಸರಿನಲ್ಲಿ ಹರಕೆ ರೂಪದಲ್ಲಿ ಕೋಣ, ಕುರಿ, ಕೋಳಿ, ಆಡು ಮತ್ತಿತರೆ ಪ್ರಾಣಿಗಳ ಬಲಿ ನಡೆಯುತ್ತದೆ. ಇದಕ್ಕೆ ಜಿಲ್ಲಾಡಳಿತ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು ಎಂದು ವಿಶ್ವ ಪ್ರಾಣಿ ಕಲ್ಯಾಣ ಮಂಡಳಿ, ಬಸವ ಧರ್ಮ ಜ್ಞಾನ ಪೀಠ ಮತ್ತು ಪಶು-ಪ್ರಾಣಿ ಬಲಿ ನಿರ್ಮೂಲನ ಮಹಾಸಂಘ ಅಧ್ಯಕ್ಷ ಶ್ರೀ ದಯಾನಂದ ಸ್ವಾಮೀಜಿ ದಾವಣಗೆರೆಯಲ್ಲಿ ಒತ್ತಾಯಿಸಿದ್ದಾರೆ.