ಗಿಗ್, ಸಿನಿ, ಮನೆಗೆಲಸ ಕಾರ್ಮಿಕರ ಕಲ್ಯಾಣಕ್ಕೆ ಅಧಿನಿಯಮದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕ ಸರ್ಕಾರ ಇ-ಕಾಮರ್ಸ್ ಪ್ಲಾಟ್ ಫಾರ್ಮ್ ಆಧಾರಿತ ಗಿಗ್ ಕಾರ್ಮಿಕರು, ಸಿನಿಮಾ, ಸಾಂಸ್ಕೃತಿಕ ಕ್ಷೇತ್ರದ ಕಲಾ ಕಾರ್ಮಿಕರು, ಮನೆಗೆಲಸದ ಗೃಹ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಲು ಪ್ರತ್ಯೇಕ ಅಧಿನಿಯಮ ರೂಪಿಸಿದ್ದು, ಸದನದಲ್ಲಿ ಅಧಿಸೂಚನೆ ಮಂಡಿಸಿ, ಅನುಮೋದನೆ ಪಡೆದು, ಕಾಯ್ದೆಯಾಗಿ ಜಾರಿಗೊಳಿಸಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.