ಹೊರಗುತ್ತಿಗೆ ನೌಕರರನ್ನು ನೇರ ಪಾವತಿಗೆ ತರಲು ಒತ್ತಾಯರಾಜ್ಯ ಬಜೆಟ್‌ನಲ್ಲಿ ಪೌರ ಕಾರ್ಮಿಕರ ಮಾದರಿಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರನ್ನು ನೇರ ಪಾವತಿಗೆ ತರುವ ಪ್ರಸ್ತಾಪ ಘೋಷಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸಲು ಒತ್ತಾಯಿಸಿ ಕರ್ನಾಟಕ ರಾಜ್ಯ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹೊರಗುತ್ತಿಗೆ ನೌಕರರ ಸಂಘ, ದಾವಣಗೆರೆ ಮಹಾನಗರ ಪಾಲಿಕೆಯ ಹೊರಗುತ್ತಿಗೆ ಘನತ್ಯಾಜ್ಯ ವಿಲೇವಾರಿ ವಾಹನ ಚಾಲಕರ ಸಂಘದಿಂದ ಪ್ರತಿಭಟಿಸಲಾಯಿತು.