ದತ್ತಾಂಶ ಸಂಗ್ರಹಕ್ಕೆ ನ್ಯಾ.ದಾಸ್ ನೇಮಕ ಉತ್ತಮ ನಿರ್ಧಾರಅನಾದಿ ಕಾಲದಿಂದಲೂ ಶೋಷಣೆಗೆ ಒಳಗಾಗಿ, ಜ್ವಲಂತ ಸಮಸ್ಯೆಗಳ ಸುಳಿಗೆ ಸಿಲುಕಿದ್ದ ಮಾದಿಗ ಮತ್ತು ಸೋದರ ಜಾತಿಗಳಿಗೆ ಒಳಮೀಸಲಾತಿ ವರವಾಗಿ ಪರಿಣಮಿಸಿದೆ. ದತ್ತಾಂಶ ಸಂಗ್ರಹಕ್ಕೆ ಆಯೋಗ ರಚಿಸಿ, ಅದಕ್ಕೆ ನ್ಯಾ.ನಾಗಮೋಹನ ದಾಸ್ ಅವರನ್ನು ನೇಮಿಸಿರುವುದು ಸ್ವಾಗತಾರ್ಹ ಹಾಗೂ ಅತ್ಯುತ್ತಮ ನಿರ್ಧಾರ ಎಂದು ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ಎಚ್.ಆಂಜನೇಯ ದಾವಣಗೆರೆಯಲ್ಲಿ ಹೇಳಿದ್ದಾರೆ.