ವಾಣಿಜ್ಯಕ್ಕಿಂತ ಆಹಾರ ಬೆಳೆಗಳ ಬೆಳೆಯಿರಿಪ್ರಸ್ತುತ ದಿನಗಳಲ್ಲಿ ರೈತರು ಕಡಿಮೆ ಸಮಯದಲ್ಲಿ ಶ್ರೀಮಂತನಾಗುವ ಭರದಲ್ಲಿ ವಾಣಿಜ್ಯ ಬೆಳೆಗಳನ್ನು ಅತಿ ಹೆಚ್ಚಾಗಿ ಬೆಳೆಯುತ್ತಿದ್ದಾರೆ. ಇದರಿಂದ ಮಾನವರ ಜೀವನಕ್ಕೆ ಬೇಕಾದ ಆಹಾರ ಪದಾರ್ಥಗಳ ಬೆಳೆಗಳ ಪ್ರಮಾಣ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿವೆ. ಇದೇ ರೀತಿ ಮುಂದುವರಿದರೆ ಮುಂದೊಂದು ದಿನ ಆಹಾರಕ್ಕಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣ ಆಗುವುದು ಎಂದು ಪಾಂಡೋಮಟ್ಟಿ ವಿರಕ್ತ ಮಠದ ಶ್ರೀ ಗುರುಬಸವ ಮಹಾಸ್ವಾಮೀಜಿ ಚನ್ನಗಿರಿಯಲ್ಲಿ ನುಡಿದಿದ್ದಾರೆ.