ಇತಿಹಾಸ ಅರಿಯಲು ಕರ್ನಾಟಕ ದರ್ಶನ ಕಾರ್ಯಕ್ರಮ ಪೂರಕ: ಶಾಸಕ ಶಾಂತನಗೌಡಬಡ ಕುಟುಂಬಗಳಿಂದ ಬಂದ ಮಕ್ಕಳು ಓದಿನ ಜೊತೆ ನಾಡಿನ ಪ್ರೇಕ್ಷಣೀಯ ಸ್ಥಳಗಳ ದರ್ಶನ ಮಾಡುವ ಮೂಲಕ ನಾಡಿನ ಇತಿಹಾಸ, ಹಿರಿಮೆಗಳು, ಸಂಸ್ಕೃತಿ, ಕಲೆಗಳ ಪರಿಚಯ ಮಾಡಿಕೊಳ್ಳಲು ಪ್ರವಾಸೋದ್ಯಮ ಮತ್ತು ಶಿಕ್ಷಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿರುವ ಕರ್ನಾಟಕ ದರ್ಶನ ಪ್ರವಾಸ ಕಾರ್ಯಕ್ರಮ ಮಹತ್ವದ್ದಾಗಿದೆ ಎಂದು ಶಾಸಕ ಡಿ.ಜಿ.ಶಾಂತನಗೌಡ ಹೊನ್ನಾಳಿಯಲ್ಲಿ ಹೇಳಿದ್ದಾರೆ.