ಪತ್ರಕರ್ತರ ಸಂಘ ಮಾಜಿ ಜಿಲ್ಲಾಧ್ಯಕ್ಷ ವೀರಪ್ಪ ಭಾವಿ ನಿಧನಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನಿಕಟಪೂರ್ವ ಅಧ್ಯಕ್ಷ, ಇಂದಿನ ಸುದ್ದಿ ಪತ್ರಿಕೆ ಸಂಪಾದಕ ವೀರಪ್ಪ ಎಂ. ಭಾವಿ (62) ನಗರದಲ್ಲಿ ಭಾನುವಾರ ಬೆಳಗಿನ ಜಾವ ನಿಧನರಾದರು. ಅವರಿಗೆ 62 ವರ್ಷ ವಯಸ್ಸಾಗಿತ್ತು. ಅವರಿಗೆ ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರ ಸೇರಿದಂತೆ ಅಪಾರ ಬಂಧು-ಬಳಗ, ಹಿತೈಷಿಗಳು ಇದ್ದಾರೆ. ನಗರದ ವೀರಶೈವ ರುದ್ರಭೂಮಿಯಲ್ಲಿ ಭಾನುವಾರ ಸಂಜೆ ಅಂತ್ಯಕ್ರಿಯೆ ನೆರವೇರಿತು.