ಮರಕುಂಬಿ ಪ್ರಕರಣದಲ್ಲಿ ಕೊಪ್ಪಳ ಕೋರ್ಟ್ ಐತಿಹಾಸಿಕ ತೀರ್ಪು ಸ್ವಾಗತಾರ್ಹ: ದಸಂಸಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಮರಕುಂಬಿಯಲ್ಲಿ ದಲಿತರು, ಸವರ್ಣೀಯರ ಮಧ್ಯೆ ಜಾತಿ ಸಂಘರ್ಷ ಪ್ರಕರಣದಲ್ಲಿ ಒಟ್ಟು 101 ಅಪರಾಧಿಗಳ ಪೈಕಿ 98 ಜನರಿಗೆ ಜೀವಾವಧಿ ಶಿಕ್ಷೆ ಹಾಗೂ ತಲಾ ₹5 ಸಾವಿರ ದಂಡ ವಿಧಿಸಲಾಗಿದೆ. ಕೊಪ್ಪಳದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನ್ಯಾಯಾಧೀಶ ಚಂದ್ರಶೇಖರ್ ನೀಡಿರುವ ಈ ಐತಿಹಾಸಿಕ ತೀರ್ಪನ್ನು ದಲಿತ ಸಂಘರ್ಷ ಸಮಿತಿ ಸ್ವಾಗತಿಸುತ್ತದೆ ಎಂದು ಜಿಲ್ಲಾ ಸಂಚಾಲಕ ಕುಂದುವಾಡ ಮಂಜುನಾಥ ತಿಳಿಸಿದ್ದಾರೆ.