ಬಸವಣ್ಣನವರ ವಚನಗಳಿಂದ ಸಮಸ್ಯೆಗಳಿಗೆ ಪರಿಹಾರ: ಮಾಜಿ ಮೇಯರ್ ಎಸ್.ಟಿ.ವೀರೇಶಪ್ರಸ್ತುತ ಸಮಾಜದಲ್ಲಿ ಸಾಕಷ್ಟು ಸಮಸ್ಯೆಗಳಿವೆ, ಆ ಎಲ್ಲಾ ಸಮಸ್ಯೆಗಳಿಗೆ ಬಸವಣ್ಣನವರು ನೂರಾರು ವರ್ಷಗಳ ಹಿಂದೆಯೇ ಪರಿಹಾರವನ್ನು ಕೊಟ್ಟಿದ್ದಾರೆ. ಸಾಮಾಜಿಕ, ರಾಜಕೀಯ, ಪರಿಸರ ಸೇರಿದಂತೆ ಹಲವಾರು ರೀತಿಯ ಸಮಸ್ಯೆಗಳನ್ನು ನೋಡುತ್ತಿದ್ದೇವೆ. ನಮ್ಮೆಲ್ಲ ಸಮಸ್ಯೆಗಳಿಗೆ ಬಸವಣ್ಣನವರ ವಚನಗಳಿಂದ ಪರಿಹಾರ ಸಿಗುತ್ತದೆ ಎಂದು ಮಾಜಿ ಮೇಯರ್ ಎಸ್.ಟಿ.ವೀರೇಶ ಹೇಳಿದರು.