ಸೂಳೆಕೆರೆ ಭರ್ತಿಗೆ ಒಂದೂವರೆ ಅಡಿಯಷ್ಟೇ ಬಾಕಿಕನ್ನಡಪ್ರಭ ವಾರ್ತೆ ಚನ್ನಗಿರಿ ಸತತ ಮಳೆಯಿಂದಾಗಿ ಏಷ್ಯಾದಲ್ಲೇ 2ನೇ ಅತಿ ದೊಡ್ಡ ಕೆರೆ ಎನಿಸಿರುವ ಚನ್ನಗಿರಿ ತಾಲೂಕಿನ ಸೂಳೆಕೆರೆ ಸಂಪೂರ್ಣ ತುಂಬಿದ್ದು, ಕೋಡಿ ಬೀಳಲು ಕೇವಲ ಒಂದೂವರೆ ಅಡಿಯಷ್ಟು ಮಾತ್ರ ಬಾಕಿಯಿದೆ. ಶಾಂತಿ ಸಾಗರ ಎಂದೂ ಕರೆಯಲಾಗುವ ಈ ಸೂಳೆಕೆರೆ, 2021-22ರಲ್ಲಿ ಕೋಡಿ ಬಿದ್ದಿತ್ತು. ಆದರೆ, 2023ರಲ್ಲಿ ಮಳೆ ಕೊರತೆಯಿಂದ ಕೆರೆ ಸಂಪೂರ್ಣ ಸೊರಗಿತ್ತು.