ಚನ್ನಗಿರಿ ತಾಲೂಕಿನಲ್ಲೂ ಕೆರೆ, ಹಳ್ಳಗಳೆಲ್ಲ ಭರ್ತಿಚನ್ನಗಿರಿ ತಾಲೂಕಿನಾದ್ಯಂತ ಭಾನುವಾರ ಸಂಜೆಯಿಂದ ಸುರಿದ ಮಳೆಗೆ ಹಳ್ಳ, ಕೊಳ್ಳ, ಕೆರೆ ಕಟ್ಟೆಗಳೆಲ್ಲಾ ತುಂಬಿವೆ. ಚನ್ನಗಿರಿಯ ಹರಿದ್ರಾವತಿ ಹಳ್ಳ, ಕಾಕನೂರು ಹಿರೇಹಳ್ಳ ಭರ್ತಿಯಾಗಿ ಹರಿಯುತ್ತಿವೆ. ತಾಲೂಕಿನಲ್ಲಿ 12 ಮನೆಗಳಿಗೆ ಹಾನಿಯಾಗಿದ್ದು, ಕೆಲ ಮನೆಗಳಿಗೆ ನೀರು ನುಗ್ಗಿವೆ ಎಂದು ತಹಸೀಲ್ದಾರ್ ಜಿ.ಎಸ್.ಶಂಕರಪ್ಪ ತಿಳಿಸಿದ್ದಾರೆ.