ಸ್ಪೃಶ್ಯ, ಅಸ್ಪೃಶ್ಯರಿಗೆ ಪ್ರತ್ಯೇಕ ಮೀಸಲಾತಿ ನೀಡಿಪರಿಶಿಷ್ಟ ಜಾತಿಯಲ್ಲಿ ಜನಸಂಖ್ಯೆ ಆಧರಿಸಿ ಒಳ ಮೀಸಲಾತಿ ಜಾರಿಗೊಳಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಬೇಕು. ಅಲ್ಲದೇ, ನಾಡಿನ ಸಾಂಸ್ಕೃತಿಕ ನಾಯಕ ಎಂದು ಕರೆಯಲ್ಪಡುವ ದೇವನೂರು ಮಹಾದೇವ, ವಿಚಾರವಂತರಾದ ಮೈಸೂರಿನ ಎಚ್.ಗೋವಿಂದಯ್ಯ, ಕೋಲಾರದ ಕೋಟಿಗಾನಹಳ್ಳಿ ರಾಮಯ್ಯ, ಎನ್.ವೆಂಕಟೇಶರಂತಹವರು ಸಹ ಈ ಬಗ್ಗೆ ಧ್ವನಿ ಎತ್ತಬೇಕು ಎಂದು ಮಾದಿಗ, ಛಲವಾದಿ ಸಮಾಜಗಳ ಹಿರಿಯ ವಕೀಲರು ದಾವಣಗೆರೆಯಲ್ಲಿ ಒತ್ತಾಯಿಸಿದ್ದಾರೆ.