ಕೊಮಾರನಹಳ್ಳಿ ಶ್ರೀ ರಂಗನಾಥ ಸ್ವಾಮಿ ಕೆರೆ ಭರ್ತಿ: ತೆಪ್ಪೋತ್ಸವ ನಡೆಸಲು ಚರ್ಚೆಮಲೇಬೆನ್ನೂರು ಸಮೀಪದ ಕೊಮಾರನಹಳ್ಳಿ ಗ್ರಾಮದ ಹೆಳವನಕಟ್ಟೆ ರಂಗನಾಥ ಸ್ವಾಮಿ ಕೆರೆ ಭರ್ತಿಯಾಗಿ ಕೋಡಿ ಬಿದ್ದಿದೆ. ಹಾಲಿವಾಣ ಗ್ರಾಮ ಪಂಚಾಯಿತಿಗೆ ಸೇರ್ಪಡೆಯಾದ ಕೊಮಾರನಹಳ್ಳಿ ಗ್ರಾಮದ ಈ ಕೆರೆಗೆ ಎರಡು ತಿಂಗಳಿಂದ ಭದ್ರಾ ನಾಲೆಯಿಂದ ನೀರು ಹರಿಸಲಾಗಿದೆ. ಜೊತೆಗೆ ಒಂದು ವಾರದಿಂದ ಸುರಿದ ಭಾರಿ ಮಳೆಗೆ ಕೆರೆಯು ಭರ್ತಿಯಾಗಿ ಕೋಡಿ ಬಿದ್ದಿದ್ದು, ಗ್ರಾಮಸ್ಥರಲ್ಲಿ ಹಾಗೂ ಈ ಭಾಗದ ರೈತರಲ್ಲಿ ಹರ್ಷ ತಂದಿದೆ.