ಗ್ರಾಪಂ ನೌಕರರನ್ನು ಸರ್ಕಾರಿ ನೌಕರರೆಂದು ಘೋಷಿಸಿರಾಜ್ಯದ ಗ್ರಾಮ ಪಂಚಾಯಿತಿ ಕರ ವಸೂಲಿಗಾರರು, ಕ್ಲರ್ಕ್, ಡೇಟಾ ಎಂಟ್ರಿ ಆಪರೇಟರ್, ನೀರುಗಂಟಿ, ಜವಾನ, ಸ್ವಚ್ಛತಾಗಾರರನ್ನು ಏಕಕಾಲಕ್ಕೆ ಅನುಮೋದನೆ ಮಾಡಿ, ಸರ್ಕಾರಿ ನೌಕರರೆಂದು ಘೋಷಿಸುವುದೂ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘ ಸಿಐಟಿಯು ಜಿಲ್ಲಾ ಸಮಿತಿ ನೇತೃತ್ವದಲ್ಲಿ ಗ್ರಾಪಂ ನೌಕರರು ದಾವಣಗೆರೆಯಲ್ಲಿ ಪ್ರತಿಭಟಿಸಿದ್ದಾರೆ.