ಅ.2ರಂದು ಗಾಂಧೀಜಿ, ಶಾಸ್ತ್ರೀಜಿ ಜಯಂತಿ: ಬಹುಮಾನ ವಿತರಣೆಜಿಲ್ಲಾಡಳಿತದಿಂದ ರಾಷ್ಟ್ರಪಿತ ಮಹಾತ್ಮ ಗಾಂಧಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮ ಅ.2ರ ಬೆಳಗ್ಗೆ 10 ಗಂಟೆಗೆ ನಗರದ ಶ್ರೀರಾಮ ನಗರದಲ್ಲಿರುವ ಗಾಂಧೀ ಭವನದಲ್ಲಿ ಏರ್ಪಡಿಸಲಾಗಿದೆ. ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆ ವಹಿಸುವರು. ಸಂಸದರು, ವಿಧಾನಸಭಾ ಸದಸ್ಯರು ಮತ್ತು ವಿಧಾನ ಪರಿಷತ್ತು ಸದಸ್ಯರು, ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.