ಸ್ವಾಮೀಜಿಗಳ ಆಶೀರ್ವಚನ ಸಮಾಜದಲ್ಲಿ ಬದಲಾವಣೆ ತರಬಲ್ಲದುನಾಡಿನ ಮಠಾಧೀಶರು ಯುವಸಮೂಹಕ್ಕೆ ದೇಶದ, ನಾಡಿನ ಸಂಸ್ಕೃತಿ, ಸಂಸ್ಕಾರಗಳನ್ನು ಅಳವಡಿಸಿಕೊಳ್ಳುವಂತೆ ಬುದ್ಧಿಮಾತು ಹೇಳಬೇಕು. ರಾಜಕಾರಣಿಗಳ ಭಾಷಣದಿಂದ ಇದು ಸಾಧ್ಯವಿಲ್ಲ. ಆದರೆ, ಮಠಗಳಲ್ಲಿ ನಡೆಯುವ ಧಾರ್ಮಿಕ ಸಭೆಗಳಲ್ಲಿ ಮಠಾಧಿಪತಿಗಳ ಆಶೀರ್ವಚನಗಳಿಂದ ಸಮಾಜದ ಬದಲಾವಣೆ ಸಾಧ್ಯ ಎಂದು ಡಿ.ಜಿ.ಶಾಂತನಗೌಡ ಹೊನ್ನಾಳಿಯಲ್ಲಿ ಹೇಳಿದ್ದಾರೆ.