ಗುಣಮಟ್ಟದ ಶಿಕ್ಷಣ ನೀಡಲು ಹೆಚ್ಚಿನ ಅನುದಾನ ನೀಡಿಹೊನ್ನಾಳಿ: ನ್ಯಾಮತಿ ತಾಲೂಕಿನ ಗ್ರಾಮಗಳಲ್ಲಿನ ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿದ ವೇಳೆ ಸಮಸ್ಯೆಗಳೇ ಅನಾವರಣಗೊಂಡಿವೆ. ಶೌಚಾಲಯ, ಮೂಲಭೂತ ಸೌಕರ್ಯ, ಗ್ರಂಥಾಲಯ ಸೇರಿದಂತೆ ಹಲವು ರೀತಿಯ ಸಮಸ್ಯೆಗಳು ಬೆಳಕಿಗೆ ಬಂದಿವೆ. ಸರ್ಕಾರಿ ಶಾಲೆಗಳ ಉಳಿವು, ಅಭಿವೃದ್ಧಿ, ಉನ್ನತ ಗುಣಮಟ್ಟದ ಶಿಕ್ಷಣ ನೀಡಲು ಹೆಚ್ಚಿನ ಅನುದಾನ ನೀಡಬೇಕು ಎಂದು ಸ್ವಾಭಿಮಾನಿ ಬಳಗದ ರಾಜ್ಯಾಧ್ಯಕ್ಷ ಜಿ. ಬಿ. ವಿನಯ್ ಕುಮಾರ್ ಒತ್ತಾಯಿಸಿದರು.