ಸುಚಿತ್ರಾ ಸಾವು: ಸಂಘಟನೆಗಳ ಅನಿರ್ದಿಷ್ಟಾವಧಿ ಧರಣಿಜಗಳೂರು ಪಟ್ಟಣದ ತಾಲೂಕು ಸಾರ್ವಜನಿಕ ಆಸ್ಪತ್ರೆ ವೈದ್ಯರು, ಸಿಬ್ಬಂದಿ ನಿರ್ಲಕ್ಷ್ಯದಿಂದ ದಲಿತ ಮಹಿಳೆ, ಸಿದ್ದಿಹಳ್ಳಿ ಗ್ರಾಮದ ಆರ್.ಸುಚಿತ್ರಾ ಮೃತಪಟ್ಟಿದ್ದಾರೆ. ತಪ್ಪಿತಸ್ಥ ವೈದ್ಯ-ಸಿಬ್ಬಂದಿಯನ್ನು ಕೂಡಲೇ ಅಮಾನತು ಮಾಡಬೇಕು. ಸುಚಿತ್ರಾ ಸಾವಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ, ನಮ್ಮ ಕನ್ನಡನಾಡು ಸಮಿತಿ ಸೇರಿದಂತೆ ವಿವಿಧ ಸಂಘಟನೆಗಳಿಂದ ಆಸ್ಪತ್ರೆ ಆವರಣದಲ್ಲಿ ಅನಿರ್ದಿಷ್ಠಾವಧಿ ಧರಣಿ ಆರಂಭಿಸಲಾಗಿದೆ.