ಬಿ.ಕಲ್ಪನಹಳ್ಳಿ ಅಂಗನವಾಡಿ ಕೇಂದ್ರಕ್ಕೆ ಡಾ.ಪ್ರಭಾ ಭೇಟಿಬಿ.ಕಲ್ಪನಹಳ್ಳಿ ಅಂಗನವಾಡಿ ಕೇಂದ್ರದ ಸ್ವಚ್ಛ ಪರಿಸರ, ಉತ್ತಮ ವಾತಾವರಣದಲ್ಲಿ ಮಕ್ಕಳ ಕಲವರ ಕಂಡ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಮೆಚ್ಚುಗೆ ವ್ಯಕ್ತಪಡಿಸಿದರು. ಅಲ್ಲದೇ, ಅಂಗನವಾಡಿ ಕೇಂದ್ರದ ಸಿಬ್ಬಂದಿ ಕಾರ್ಯ ಮೆಚ್ಚಿ, ಸಂದರ್ಶಕರ ವಹಿಯಲ್ಲಿ ಸ್ವತಃ ನಾಲ್ಕು ಒಳ್ಳೆಯ ಮಾತುಗಳನ್ನು ಬರೆದು, ಹಸ್ತಾಕ್ಷರ ಮೂಡಿಸುವ ಮೂಲಕ ಪ್ರೋತ್ಸಾಹಿಸಿದ್ದಾರೆ.