ಜಿಲ್ಲಾ ರಂಗಮಂದಿರ ನಿರ್ಮಾಣಕ್ಕೆ ಇನ್ನೂ ₹4 ಕೋಟಿ ಅಗತ್ಯಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ₹4 ಕೋಟಿ ವೆಚ್ಚದಲ್ಲಿ ದಾವಣಗೆರೆಯಲ್ಲಿ ಜಿಲ್ಲಾ ರಂಗ ಮಂದಿರ ನಿರ್ಮಾಣವಾಗುತ್ತಿದೆ. ಅದನ್ನು ಪೂರ್ಣಗೊಳಿಸಲು ಅಗತ್ಯ ಅನುದಾನ ಕೊರತೆ ಆಗಿದ್ದರೆ ಸ್ಮಾರ್ಟ್ ಸಿಟಿ ಹಾಗೂ ಇಲಾಖೆ ಅನುದಾನ ಬಳಕೆಗೆ ಪ್ರಸ್ತಾಪನೆ ಸಿದ್ಧಪಡಿಸಿ, ಸಲ್ಲಿಸುವಂತೆ ತೋಟಗಾರಿಕೆ, ರೇಷ್ಮೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಸರ್ಕಾರದ ಕಾರ್ಯದರ್ಶಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಶಮ್ಲಾ ಇಕ್ಬಾಲ್ ದಾವಣಗೆರೆಯಲ್ಲಿ ಸೂಚಿಸಿದ್ದಾರೆ.