ಹೊನ್ನಾಳಿಯಲ್ಲಿ ಹಳಿ ತಪ್ಪಿದ ಸ್ವಚ್ಛತೆ: ಪುರಸಭೆ ಜಾಣಗುರುಡು ಪ್ರದರ್ಶನಪಟ್ಟಣದ ನ್ಯಾಮತಿ ರಸ್ತೆಯ ಕೆಎಸ್ಆರ್ಟಿಸಿ ಕಾಪೌಂಡ್ ಪಕ್ಕದಲ್ಲಿ ಕಸದ ರಾಶಿ, ಕೊಳಚೆ ನೀರು ಸಂಗ್ರಹವಾಗಿದೆ. ಆದರೆ, ಪುರಸಭೆ ಅಧ್ಯಕ್ಷರು, ಮುಖ್ಯಾಧಿಕಾರಿ, ಸದಸ್ಯರು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಈ ಬಗ್ಗೆ ಮಾಹಿತಿ ಇದ್ದರೂ, ಕ್ರಮ ಜರುಗಿಸದೇ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಪರಿಣಾಮ ಪಟ್ಟಣದ ಜನತೆಗೆ ಕಿರಿಕಿರಿಯಾಗುತ್ತಿದೆ.