ಸ್ತನ್ಯಪಾನ ಮಗುವಿನ ಮೆದುಳಿನ ಬೆಳವಣಿಗೆಗೂ ಸಹಕಾರಿಎದೆಹಾಲು ಮಗುವಿಗೆ ಸಂಪೂರ್ಣವಾದ ಆಹಾರವಾಗಿದೆ. ಮಗುವಿನ ಮೆದುಳಿನ ಬೆಳವಣಿಗೆಗೂ ಸಹಕಾರಿಯಾಗಿದೆ. ಮಕ್ಕಳಿಗೆ ಅತ್ಯುತ್ತಮ ಪೋಷಕಾಂಶಗಳನ್ನು ಒದಗಿಸುತ್ತದೆ. ಇದರಲ್ಲಿ ಶಿಶುಗಳ ಆರೋಗ್ಯಕರ ಬೆಳವಣಿಗೆಗೆ ಅಗತ್ಯವಿರುವ ವಿಟಮಿನ್, ಖನಿಜಗಳು, ಪ್ರೋಟಿನ್, ಕೊಬ್ಬಿನಾಂಶಗಳು ಸೇರಿವೆ ಎಂದು ಎಸ್.ಎಸ್. ಹೈಟೆಕ್ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಮಕ್ಕಳ ವಿಭಾಗದ ಪ್ರಾಧ್ಯಾಪಕಿ ಡಾ. ಜಿ.ಎಸ್. ಲತಾ ದಾವಣಗೆರೆಯಲ್ಲಿ ಹೇಳಿದ್ದಾರೆ.