ಮಹಿಳೆಯರು ಗೃಹ ಕೈಗಾರಿಕೆಗಳಲ್ಲಿ ತೊಡಗಲಿಸ್ಫೂರ್ತಿ ತರಬೇತಿ ಸಂಸ್ಥೆಯು ಕರ್ನಾಟಕದಲ್ಲಿ ಅನೇಕ ಜಿಲ್ಲಾ ಹಾಗೂ ತಾಲೂಕುಮಟ್ಟದಲ್ಲಿ 24 ವರ್ಷಗಳಿಂದ ನಿರಂತರವಾಗಿ ಮಹಿಳಾ ಸ್ವಯಂ ಉದ್ಯೋಗ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದೆ. ಇಲ್ಲಿಯವರೆಗೆ 4,80,000ಕ್ಕಿಂತ ಹೆಚ್ಚಿನ ಮಹಿಳೆಯರಿಗೆ ಹಾಗೂ 6,500ಕ್ಕಿಂತ ಹೆಚ್ಚಿನ ವಿಕಲಚೇತನ ಮಹಿಳೆಯರಿಗೆ ತರಬೇತಿ ನೀಡಿದೆ ಎಂದು ವನಿತಾ ಸಮಾಜದ ಮಾಜಿ ಅಧ್ಯಕ್ಷೆ ಲತಿಕಾ ಶೆಟ್ಟಿ ಹೇಳಿದ್ದಾರೆ.