ಬಂದ್ ಖಂಡಿಸಿ ಬಿಜೆಪಿ ಕಚೇರಿಗೆ ಕಾಂಗ್ರೆಸ್ ಮುತ್ತಿಗೆ ಯತ್ನಚಿಕ್ಕಮಗಳೂರು, ಚಿತ್ರದುರ್ಗ ಜಿಲ್ಲೆಗೆ ಭದ್ರಾ ಡ್ಯಾಂ ಬಲದಂಡೆ ನಾಲೆಯಲ್ಲಿ ಬಫರ್ ಝೋನ್‌ನಲ್ಲಿ ಅಪಾಯಕಾರಿ ಕಾಮಗಾರಿ ಕೈಗೊಂಡಿದ್ದನ್ನು ನಿಲ್ಲಿಸುವಂತೆ ನಡೆಸುತ್ತಿದ್ದ ದಾವಣಗೆರೆ ಬಂದ್ ಖಂಡಿಸಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಶನಿವಾರ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಹರಸಾಹಸ ಮಾಡಿದ್ದಾರೆ.