32ನೇ ವಾರ್ಡ್‌ನಲ್ಲಿ ರಸ್ತೆ ಅಭಿವೃದ್ಧಿ, ಒತ್ತುವರಿಗೆ ತೆರವಿಗೆ ಅಡ್ಡಿರಸ್ತೆ ಅಭಿವೃದ್ಧಿಗಾಗಿ ಒತ್ತುವರಿ ತೆರವುಗೊಳಿಸಲು ದಾವಣಗೆರೆ ಮಹಾನಗರ ಪಾಲಿಕೆಯ 32ನೇ ವಾರ್ಡ್‌ನಲ್ಲಿ ಕಾಂಗ್ರೆಸ್ ಪಕ್ಷದ ಕೆಲವು ಕಾರ್ಯಕರ್ತರು ಅಡ್ಡಿಪಡಿಸುತ್ತಿದ್ದರೆ, ಮತ್ತೊಂದು ಕಡೆ ಖಾಸಗಿ ಜಾಗದ ಸೆಟ್ ಬ್ಯಾಕ್ ಒಳಗೆ ಶೌಚಾಲಯ, ಸ್ನಾನಗೃಹ ನಿರ್ಮಿಸಿಕೊಳ್ಳುವ ಮೂಲಕ ಅಭಿವೃದ್ಧಿ ಕಾರ್ಯಕ್ಕೆ ಅಡ್ಡಿ ಮಾಡಿದ್ದಾರೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ.