ಕಾರ್ಮಿಕ ವರ್ಗಕ್ಕೆ ಸರ್ಕಾರಗಳು ಹೆಚ್ಚು ಸೌಲಭ್ಯಗಳನ್ನು ಕಲ್ಪಿಸಲಿಚನ್ನಗಿರಿ: ಕಾರ್ಮಿಕ ವರ್ಗವು ಈ ದೇಶದ ಶಕ್ತಿಯಾಗಿದ್ದು, ಕಾರ್ಮಿಕ ವರ್ಗ ಒಂದು ದಿನ ತಮ್ಮ ಕೆಲಸವನ್ನು ನಿಲ್ಲಿಸಿದರೆ ದೇಶದ ಆರ್ಥಿಕತೆಯೇ ಬುಡಮೇಲು ಆಗಲಿದೆ. ದೇಶದ ಆರ್ಥಿಕ ಸ್ಥಿತಿಯನ್ನು ಕಾಪಾಡುವಂತಹ ಕಾರ್ಮಿಕ ವರ್ಗಕ್ಕೆ ಸರ್ಕಾರಗಳು ಹೆಚ್ಚು-ಹೆಚ್ಚು ಸೌಲಭ್ಯಗಳನ್ನು ಕಲ್ಪಿಸಿಕೊಡಬೇಕು ಎಂದು ಹಿರೇಮಠದ ಶ್ರೀ ಕೇದಾರಲಿಂಗ ಶಿವಶಾಂತವೀರ ಶಿವಾಚಾರ್ಯ ಮಹಾಸ್ವಾಮೀಜಿ ಒತ್ತಾಯಿಸಿದರು.