ಮಕ್ಕಳ ಹಕ್ಕುಗಳ ರಕ್ಷಣೆ ಮನೆಗಳಿಂದ ಆರಂಭವಾಗಲಿಭಾರತದಂತಹ ಅಭಿವೃದ್ಧಿ ಪಥದಲ್ಲಿ ಸಾಗುತ್ತಿರುವ ರಾಷ್ಟ್ರಗಳಲ್ಲಿ ಹಲವಾರು ಸಾಮಾಜಿಕ ಸವಾಲುಗಳು ತಾಂಡವವಾಡುತ್ತಿವೆ. ಶಿಕ್ಷಣ, ಬಾಲ ಕಾರ್ಮಿಕತೆ, ಬಾಲ್ಯವಿವಾಹ, ಭಿಕ್ಷಾಟನೆ, ಬಾಲಾಪರಾಧದಂತಹ ಸಮಸ್ಯೆಗಳಿಂದಾಗಿ ಮಕ್ಕಳು ದೌರ್ಜನ್ಯಕ್ಕೆ ಒಳಗುತ್ತಿದ್ದಾರೆ ಎಂದು ದಾವಣಗೆರೆ ವಿಶ್ವವಿದ್ಯಾನಿಲಯದ ಸಮಾಜ ಕಾರ್ಯ ವಿಭಾಗ ಮುಖ್ಯಸ್ಥ ಡಾ. ಎಂ.ಯು. ಲೋಕೇಶ್ ದಾವಣಗೆರೆಯಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.