ವಿದ್ಯಾರ್ಥಿಗಳು ಕೆಂಪೇಗೌಡ ಸಾಧನೆ ಅರಿತುಕೊಳ್ಳಲಿಬೆಂಗಳೂರು ನಿರ್ಮಾತೃ ಎನಿಸಿರುವ ನಾಡಪ್ರಭು ಕೆಂಪೇಗೌಡರು ಮೊದಲು ಯಲಹಂಕಕ್ಕೆ ಬಂದು, ನಂತರ ಮಾಗಡಿಗೆ ಬಂದರು. ಪೇಟೆಗಳನ್ನು ನಿರ್ಮಿಸಿ, ವಾಣಿಜ್ಯ ವಹಿವಾಟುಗಳು, ಕುಶಲಕರ್ಮಿಗಳ ವ್ಯಾಪಾರಕ್ಕೆ ದಾರಿ ಮಾಡಿಕೊಟ್ಟರು. ಕೆಂಪೇಗೌಡರ ರೀತಿ ವೈಜ್ಞಾನಿಕ ತಳಹದಿ ಮೇಲೆ ವಿದ್ಯಾರ್ಥಿಗಳು ಚಿಂತನೆ ಮಾಡಬೇಕಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಹೇಳಿದ್ದಾರೆ.