ಬೆಸ್ಕಾಂಗೆ ₹83,107 ಬಿಲ್ ಪಾವತಿ: ಖಾಸಗಿ ಬಸ್ ನಿಲ್ದಾಣಕ್ಕೆ ವಿದ್ಯುತ್ಕಳೆದ ಶನಿವಾರ ಮತ್ತು ಭಾನುವಾರ ಹೊನ್ನಾಳಿ ಖಾಸಗಿ ಬಸ್ ನಿಲ್ದಾಣ ಹಾಗೂ ನಿಲ್ದಾಣದಲ್ಲಿನ ಹತ್ತಾರು ಮಳಿಗೆಗಳಿಗೆ ಸ್ಥಳೀಯ ಬೆಸ್ಕಾಂ ವಿದ್ಯುತ್ ಸಂಪರ್ಕ ಕಡಿತಗೊಳಿಸಿತ್ತು. ಪುರಸಭೆಯವರು ವಿದ್ಯುತ್ ಬಿಲ್ ಪಾವತಿಸಿಲ್ಲ ಎಂಬ ಕಾರಣಕ್ಕೆ ವಿದ್ಯುತ್ ಕಡಿತಗೊಳಿಸಲಾಗಿತ್ತು. ಇದರಿಂದ ಪ್ರಯಾಣಿಕರು, ಸಾರ್ವಜನಿಕರು ಹಾಗೂ ಅಂಗಡಿ ಮಳಿಗೆಗಳ ವ್ಯಾಪಾರಿಗಳಿಗೆ ತೀವ್ರ ಸಮಸ್ಯೆಯಾಗಿತ್ತು. ಈ ಬಗ್ಗೆ ಕನ್ನಡಪ್ರಭ ವರದಿ ಪ್ರಕಟಿಸಿ ಗಮನ ಸೆಳೆದ ಮೇರೆಗೆ ಎಚ್ಚೆತ್ತ ಅಧಿಕಾರಿಗಳು ವಿದ್ಯುತ್ ಸೌಲಭ್ಯ ಕಲ್ಪಿಸಿದ್ದಾರೆ.