ಅಭಿವೃದ್ಧಿಗೆ ಎಸ್‌ಎಸ್, ಎಸ್‌ಎಸ್‌ಎಂ ಸಲಹೆ ಪಡೆದರೆ ತಪ್ಪೇನು?ದಾವಣಗೆರೆ ನಗರ, ಜಿಲ್ಲೆಯ ಅಭಿವೃದ್ಧಿಗೆ ಶಾಸಕ ಡಾ.ಶಾಮನೂರು ಶಿವಶಂಕರಪ್ಪ, ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರ ಕೊಡುಗೆ ಅಪಾರ ಎಂಬ ಸಂಗತಿ ಪ್ರತಿಯೊಬ್ಬರಿಗೂ ಗೊತ್ತಿದೆ. ಇಂಥ ಹಿರಿಯರು, ಅನುಭವಿಗಳ ಸಲಹೆ ಪಡೆಯುವುದರಲ್ಲಿ ತಪ್ಪೇನಿದೆ ಎಂದು ಮೇಯರ್ ಬಿ.ಎಚ್. ವಿನಾಯಕ ಪೈಲ್ವಾನ್ ಬಿಜೆಪಿ ಸದಸ್ಯರನ್ನು ಪ್ರಶ್ನಿಸಿದ್ದಾರೆ.