ಇಂದು ಮಾದಕ ವ್ಯಸನ ವಿರೋಧಿ ದಿನಾಚರಣೆಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ಮನೋವೈದ್ಯಕೀಯ ವಿಭಾಗ, ಚಿಗಟೇರಿ ಜಿಲ್ಲಾ ಆಸ್ಪತ್ರೆ ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಕಾರಾಗೃಹ ಇಲಾಖೆ ಸಹಯೋಗದಲ್ಲಿ ನಗರದ ಜಿಲ್ಲಾ ಕಾರಾಗೃಹ ಸಭಾಂಗಣದಲ್ಲಿ ಜೂ.27 ರಂದು "ಸಾಕ್ಷಗಳು ಸ್ಪಷ್ಟವಾಗಿದೆ, ತಡೆಗಟ್ಟುವಲ್ಲಿ ಹೂಡಿಕೆ ಮಾಡಿ " ಘೋಷವಾಕ್ಯದೊಂದಿಗೆ ಅಂತರ ರಾಷ್ಟ್ರೀಯ ಮಾದಕ ವ್ಯಸನ ಹಾಗೂ ಅನಧಿಕೃತ ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ "ಯನ್ನು ಆಯೋಜಿಸಲಾಗಿದೆ.