ಜಿಲ್ಲಾದ್ಯಂತ ತ್ಯಾಗ, ಬಲಿದಾನ ಸಂಕೇತ ಬಕ್ರೀದ್ ಸಂಭ್ರಮತ್ಯಾಗ, ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ನಗರ ಸೇರಿದಂತೆ ಜಿಲ್ಲಾದ್ಯಂತ ಸೋಮವಾರ ಮುಸ್ಲಿಂ ಧರ್ಮೀಯರು ಶ್ರದ್ಧಾ-ಭಕ್ತಿಯಿಂದ ಆಚರಿಸಿದರು. ದಾವಣಗೆರೆ ನಗರದ ವಿವಿಧ ಈದ್ಗಾ ಮೈದಾನಗಳಲ್ಲಿ ಪುಟ್ಟ ಮಕ್ಕಳಿಂದ ಹಿರಿಯ ನಾಗರಿಕರವರೆಗೆ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ, ಪರಸ್ಪರ ಶುಭಾಶಯಗಳ ವಿನಿಮಯ ಮಾಡಿಕೊಂಡರು.