ನಾಡಿನಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಸಾಧನೆ ಅಮೋಘಕನ್ನಡ ನಾಡಿಗೆ ಕನ್ನಡ ಸಾಹಿತ್ಯ ಪರಿಷತ್ತು, ಕೆಆರ್‌ಎಸ್ ಅಣೆಕಟ್ಟು, ವಾಣಿ ವಿಲಾಸ ಸಾಗರ, ಶಿವನಸಮುದ್ರ ಜಲ ವಿದ್ಯುತ್ ಯೋಜನೆ, ಮೈಸೂರು ಬ್ಯಾಂಕ್, ಮೈಸೂರು ವಿಶ್ವವಿದ್ಯಾಲಯ, ಬೆಂಗಳೂರು ವಿಶ್ವವಿದ್ಯಾಲಯ, ಮೈಸೂರು ಮೆಡಿಕಲ್ ಕಾಲೇಜು, ನಿಮ್ಹಾನ್ಸ್ ಆಸ್ಪತ್ರೆ, ಮಿಂಟೋ ಆಸ್ಪತ್ರೆ ಮೊದಲಾದ ಹಲವಾರು ಶಾಶ್ವತ ಯೋಜನೆಗಳನ್ನು ನೀಡಿದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಕನ್ನಡಿಗರಿಗೆ ಪ್ರಾತಃಸ್ಮರಣೀಯರು ಎಂದು ಕೆ.ರಾಘವೇಂದ್ರ ನಾಯರಿ ದಾವಣಗೆರೆಯಲ್ಲಿ ಅಭಿಪ್ರಾಯಪಟ್ಟಿದ್ದಾರೆ.