ದಾವಣಗೆರೆಯಲ್ಲಿ ವಿಧಾನ ಪರಿಷತ್ತು ಚುನಾವಣೆ ಸುಸೂತ್ರಕರ್ನಾಟಕ ವಿಧಾನದ ಪರಿಷತ್ತಿನ ಆಗ್ನೇಯ ಶಿಕ್ಷಕರ ಕ್ಷೇತ್ರ, ನೈಋತ್ಯ ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರಕ್ಕೆ ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥಿತವಾಗಿ ಮತ ಚಲಾವಣೆಯಾಗಿದೆ. ಜಿಲ್ಲೆಯಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಶೇ.92.93, ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ಶೇ.87.74 ಹಾಗೂ ಪದವೀಧರರ ಕ್ಷೇತ್ರಕ್ಕೆ ಶೇ.80.95ರಷ್ಟು ಮತದಾನವಾಗಿದೆ ಎಂದು ಸಹಾಯಕ ಚುನಾವಣಾಧಿಕಾರಿ, ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ ತಿಳಿಸಿದ್ದಾರೆ.