ವಾಲ್ಮೀಕಿ ನಿಗಮ ಅವ್ಯವಹಾರ ಸಿಬಿಐ ತನಿಖೆ ನಡೆಸಬೇಕು: ಗುಮ್ಮನೂರು ಮಲ್ಲಿಕಾರ್ಜುನರಾಜ್ಯದ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ₹187.33 ಕೋಟಿ ಅವ್ಯವಹಾರ ಪ್ರಕರಣವನ್ನು ರಾಜ್ಯ ಸರ್ಕಾರ ಅತ್ಯಂತ ಸೂಕ್ಷ್ಮ ಪ್ರಕರಣ ಎಂದು ಪರಿಗಣಿಸಿ, ನಿಗಮ ಅಧ್ಯಕ್ಷ ನಾಗೇಂದ್ರ ಅವರ ರಾಜಿನಾಮೆ ಪಡೆಯಬೇಕು. ಅಲ್ಲದೇ, ಇಡೀ ಪ್ರಕರಣ ಸಿಬಿಐ ತನಿಖೆ ನಡೆಸಬೇಕು ಎಂದು ನಾಯಕ ಸಮಾಜದ ಹಿರಿಯ ಮುಖಂಡ, ವಕೀಲ ಗುಮ್ಮನೂರು ಕೆ.ಎಂ.ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ಒತ್ತಾಯಿಸಿದ್ದಾರೆ.