ಚನ್ನಗಿರಿ ಗಲಭೆ ಪ್ರಕರಣ ಹೆಚ್ಚಿನ ತನಿಖೆ: ಡಾ.ಪರಮೇಶ್ವರಚನ್ನಗಿರಿ ಘಟನೆ ಕುರಿತಂತೆ ಮಾಹಿತಿ ಪಡೆಯಲು ಖುದ್ದಾಗಿ ನಾನು ಇಲ್ಲಿಗೆ ಬಂದಿದ್ದೇನೆ. ಪೊಲೀಸ್ ಠಾಣೆಗೆ ನುಗ್ಗಿ ಧ್ವಂಸ ಮಾಡಿದ್ದು ಒಂದು ಪ್ರಕರಣವಾದರೆ, ಮಟ್ಕಾ ಆಡಿಸುತ್ತಿದ್ದ ವ್ಯಕ್ತಿ ಸಾವನ್ನಪ್ಪಿದ ಪ್ರಕರಣ ಸಹ ಒಂದಾಗಿದೆ. ಎರಡೂ ಪ್ರಕರಣಗಳನ್ನು ಹೆಚ್ಚಿನ ತನಿಖೆಗೆ ನೀಡಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಚನ್ನಗಿರಿ ಪಟ್ಟಣದಲ್ಲಿ ಹೇಳಿದ್ದಾರೆ.