ಕಬ್ಬು ಬೆಳೆ ಹಾನಿಗೆ ಸೂಕ್ತ ಪರಿಹಾರ ನೀಡಿಭದ್ರಾ ಕಾಡಾ ಸಮಿತಿಯ ಅವೈಜ್ಞಾನಿಕ ವೇಳಾಪಟ್ಟಿ, ಅಂತರ್ಜಲ ಕುಸಿತ, ಉಷ್ಣ ಹವೆಯಿಂದಾಗಿ ದಾವಣಗೆರೆ ಸಕ್ಕರೆ ಕಂಪನಿ ನಿಯಮಿತದ ವ್ಯಾಪ್ತಿಯಲ್ಲಿ ಸುಮಾರು 2070 ಎಕರೆ ಕಬ್ಬಿನ ಬೆಳೆ ಸಂಪೂರ್ಣ ಒಣಗಿ ನಾಶವಾಗಿದೆ. ಈ ಹಿನ್ನೆಲೆ ರೈತರಿಗೆ ಸೂಕ್ತ ಪರಿಹಾರ ನೀಡುವಂತೆ ಕುಕ್ಕವಾಡ ಗ್ರಾಮದ ದಾವಣಗೆರೆ ಸಕ್ಕರೆ ಕಂಪನಿ ನಿಯಮಿತ, ಜಿಲ್ಲಾ ರೈತರ ಒಕ್ಕೂಟ, ಕಬ್ಬು ಬೆಳೆಗಾರರ ಸಂಘದಿಂದ ಜಿಲ್ಲಾಡಳಿತಕ್ಕೆ ಮನವಿ ಅರ್ಪಿಸಲಾಯಿತು.