ಚೊಂಬ ಕೊಟ್ಟ ಕೇಂದ್ರ: ಇಂದು ಬಿಜೆಪಿ ಕಚೇರಿಗೆ ಕಾಂಗ್ರೆಸ್ ಮುತ್ತಿಗೆಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರವು ಬಜೆಟ್‌ನಲ್ಲಿ ಅನುದಾನ ನೀಡದಿರುವುದು, ಲೋಕಸಭೆ ಚುನಾವಣೆ ಪೂರ್ವದಲ್ಲಿ ನೀಡಿದ್ದ ಭಾರತ್ ಅಕ್ಕಿ ನೀಡದಿರುವುದನ್ನು ಖಂಡಿಸಿ ಖಾಲಿ ಚೊಂಬು ಹಿಡಿದುಕೊಂಡು ನಗರದ ಬಿಜೆಪಿ ಜಿಲ್ಲಾ ಕಚೇರಿಗೆ ಕಾಂಗ್ರೆಸ್ ಪಕ್ಷದ ಜಿಲ್ಲಾ ಘಟಕದಿಂದ ಆ.4ರಂದು ಮುತ್ತಿಗೆ ಹಾಕುವುದಾಗಿ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ದೂಡಾ ನೂತನ ಅಧ್ಯಕ್ಷ ದಿನೇಶ ಕೆ.ಶೆಟ್ಟಿ ಹೇಳಿದರು.