ಪತ್ನಿಗೆ ಹಲ್ಲೆಗೈದು ಜೀವ ಬೆದರಿಕೆ ಹಾಕಿದ್ದ ಪೊಲೀಸ್ ಸಿಬ್ಬಂದಿ ಅಮಾನತುಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿ, ಹೆಂಡತಿಯನ್ನು ನಿರ್ಲಕ್ಷಿಸಿ, ಆಕೆಯ ಮೇಲೆ ಹಲ್ಲೆ ಮಾಡಿದ್ದ ದೂರಿನ ಹಿನ್ನೆಲೆ ಹೊನ್ನಾಳಿ ಪೊಲೀಸ್ ಠಾಣೆ ಸಿಬ್ಬಂದಿ ಟಿ.ಪ್ರಸನ್ನ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಪತ್ನಿ ಆರ್.ಮಾಲಾ ಅವರು ಪ್ರಸನ್ನ ಅವರಿಂದ ತಮಗೆ ಆಗುತ್ತಿರುವ ತೊಂದರೆ ಕುರಿತು ಜಿಲ್ಲಾ ಎಸ್‌ಪಿ ಉಮಾ ಪ್ರಶಾಂತ್ ಅವರನ್ನು ಭೇಟಿಯಾಗಿ, ದೂರು ಅರ್ಜಿ ಸಲ್ಲಿಸಿದ್ದರು.