ಎಂಇಎಸ್, ಶಿವಸೇನೆ ನಿಷೇಧಕ್ಕೆ ಆಗ್ರಹಕನ್ನಡಿಗರ ಮೇಲೆ ದೌರ್ಜನ್ಯ ಎಸಗುತ್ತಿರುವ, ಕೆಎಸ್ಆರ್ಟಿಸಿ ಬಸ್ ನಿರ್ವಾಹಕನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ, ಹೆಣ್ಣು ಮಗಳಿಂದ ಸುಳ್ಳು ಪೋಕ್ಸೋ ಕೇಸ್ ದಾಖಲಿಸಿದ್ದು ಸೇರಿದಂತೆ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ, ದಬ್ಬಾಳಿಕೆ ನಡೆಸುತ್ತಿರುವ ಎಂಇಎಸ್ ಸಂಘಟನೆ ನಿಷೇಧಿಸಿ, ಪುಂಡರನ್ನು ಮಟ್ಟ ಹಾಕುವಂತೆ ಒತ್ತಾಯಿಸಿ ವಿಶ್ವ ಕರ್ನಾಟಕ ರಕ್ಷಣಾ ವೇದಿಕೆಯಿಂದ ನಗರದಲ್ಲಿ ಶನಿವಾರ ಪ್ರತಿಭಟಿಸಲಾಯಿತು.