ನೀತಿ ಸಂಹಿತೆ ಉಲ್ಲಂಘನೆ: ₹14.32 ಕೋಟಿ ಮೌಲ್ಯದ ವಿವಿಧ ವಸ್ತುಗಳು, ನಗದು ವಶದಾವಣಗೆರೆ ಲೋಕಸಭಾ ಚುನಾವಣೆ ನಡೆಯುತ್ತಿದ್ದು, ನೀತಿ ಸಂಹಿತೆಯು ಮಾ.16ರಿಂದಲೇ ಜಾರಿಯಲ್ಲಿದೆ. ಏ.24ರವರೆಗೆ ನೀತಿ ಸಂಹಿತೆ ಉಲ್ಲಂಘನೆಯಡಿ ₹14,32,07,731 ಮೌಲ್ಯದ ವಿವಿಧ ವಸ್ತುಗಳು, ಮದ್ಯ, ಮಾದಕ ವಸ್ತು ಸೇರಿದಂತೆ ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ತಿಳಿಸಿದ್ದಾರೆ.