ಮೌಲ್ಯಾಂಕನ ಪರೀಕ್ಷೆ ಪದ್ಧತಿ ರದ್ದುಗೊಳಿಸಬೇಕುಮೌಲ್ಯಾಂಕನ ಪರೀಕ್ಷಾ ಪದ್ಧತಿ ಅವೈಜ್ಞಾನಿಕವಾಗಿದ್ದು, ಹಲವಾರು ಲೋಪದೋಷಗಳಿಂದ ಕೂಡಿದೆ. ರಾಜ್ಯ ಸರ್ಕಾರ, ಶಿಕ್ಷಣ ಇಲಾಖೆ ಕೂಡಲೇ ಈ ಪದ್ಧತಿ ರದ್ದುಪಡಿಸಬೇಕು. ಮೊದಲಿದ್ದ ಪರೀಕ್ಷಾ ಪದ್ಧತಿಯನ್ನೇ ಮುಂದುವರಿಸಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ರಾಜ್ಯ ಅನುದಾನ ರಹಿತ ಖಾಸಗಿ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟ ಅಧ್ಯಕ್ಷ ರೇವಣಸಿದ್ದಪ್ಪ ಹೊನ್ನಾಳಿಯಲ್ಲಿ ಹೇಳಿದ್ದಾರೆ.