ಬೀದಿ ವ್ಯಾಪಾರಿಗಳಿಗೆ ಛತ್ರಿ ವಿತರಣೆ ಸೇವೆ ಅನುಕರಣೀಯದಿನನಿತ್ಯದ ಬದುಕಿನಲ್ಲಿ ತರಕಾರಿ ಮಾರಾಟ ಮಾಡಿ, ಜೀವನ ಸಾಗಿಸುತ್ತಿರುವ ಬೀದಿಬದಿ ವ್ಯಾಪಾರಸ್ಥರು ಗಾಳಿ, ಮಳೆ, ಬಿಸಿಲಿನಿಂದ ರಕ್ಷಿಸಿಕೊಳ್ಳಲು ಜಿಪಂ ಮಾಜಿ ಸದಸ್ಯ ಎಂ.ಆರ್.ಮಹೇಶ್ ಉಚಿತವಾಗಿ ಛತ್ರಿಗಳನ್ನು ನೀಡಿ, ಮಾನವೀಯತೆ ಮೆರೆದಿದ್ದಾರೆ. ಅವರ ಜನಸೇವೆ ವೈಖರಿ ಇತರರಿಗೆ ಮಾದರಿಯಾಗಿದೆ ಎಂದು ಬಿಜೆಪಿ ಮುಖಂಡ ಅರಕೆರೆ ಎ.ಬಿ.ಹನುಮಂತಪ್ಪ ದಾವಣಗೆರೆಯಲ್ಲಿ ಹೇಳಿದ್ದಾರೆ.