ಇಂದಿನಿಂದ ಎಸ್ಸೆಸ್ಸೆಲ್ಸಿ ಹಬ್ಬ: 22579 ಮಕ್ಕಳಲ್ಲಿ ಸಂಭ್ರಮಹೈಸ್ಕೂಲ್ ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದ ಮೈಲುಗಲ್ಲಾದ ಎಸ್ಸೆಸ್ಸೆಲ್ಸಿ ಪರೀಕ್ಷೆ 2024-25 ಜಿಲ್ಲಾದ್ಯಂತ ಮಾ.21ರಿಂದ ಆರಂಭವಾಗಿ ಏ.4 ರವರೆಗೆ ನಡೆಯಲಿದೆ. ಜಿಲ್ಲೆಯ 81 ಪರೀಕ್ಷಾ ಕೇಂದ್ರಗಳಲ್ಲಿ ಖಾಸಗಿ, ಖಾಸಗಿ ಪುನರಾವರ್ತಿತ, ಪುನರಾವರ್ತಿತ ವಿದ್ಯಾರ್ಥಿಗಳು, ಹೊಸ ವಿದ್ಯಾರ್ಥಿಗಳು ಸೇರಿದಂತೆ 22,579 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.